ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಸದಾ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟೀವ್ ಆಗಿ ಇರೋ ಹುಡುಗಿ, ಆದರೆ ಈ ಕೆಲವು ದಿನಗಳಿಂದ ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿಲ್ಲ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ನಾನ್ಯಾಕೆ ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ದೂರವಿದ್ದೆ ಎಂಬುದನ್ನು ರಿವೀಲ್ ಮಾಡಿದ್ದಾರೆ.
ಇತ್ತೀಚೆಗೆ ನನಗೆ ಸಣ್ಣದಾಗಿ ಅಪಘಾತವಾಗಿತ್ತು. ಈಗ ನಾನು ಚೇತರಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಜೀವನ ತುಂಬಾ ಕ್ಷಣಿಕ. ನಾಳೆ ಇರುತ್ತೇವೋ, ಇಲ್ಲವೋ ಗೊತ್ತಿಲ್ಲ ಎಂದು ಅಪಘಾತದ ಬೆನ್ನಲ್ಲೇ ನಟಿ ಪೋಸ್ಟ್ ಹಂಚಿಕೊಂಡಿದ್ದಾರೆ.
View this post on Instagram