ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಯೋಸೈಟಿಸ್ ಎಂಬ ಕಾಯಿಲೆಯಿಂದ ಬಳಲುತ್ತಿರುವ ನಟಿ ಸಮಂತಾ ವಿದೇಶದಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಇಂದು ಮುಂಬೈಗೆ ವಾಪಾಸ ಆಗಿದ್ದಾರೆ.
ಸಮಂತಾ ಅನಾರೋಗ್ಯದ ಬಳಿಕ ಮೊದಲ ಬಾರಿಗೆ ಕ್ಯಾಮೆರಾ ಸೆರೆಯಾಗಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
ಕೆಲ ತಿಂಗಳುಗಳಿಂದ ಸಮಂತಾ ಮಯೋಸೈಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರು. ಇದರ ಮಧ್ಯೆ ʻಯಶೋದʼಸಿನಿಮಾ ಪ್ರಚಾರಕ್ಕೆ ಭಾಗಿಯಾಗಿ ಸಮಂತಾ ವಿದೇಶಕ್ಕೆ ಹಾರಿದ್ದರು. ನಟಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ, ನಟಿ ಸಮಂತಾ ಮುಂಬೈ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣುಗಳಿಗೆ ಸೆರೆ ಸಿಕ್ಕಿದ್ದಾರೆ.