ಉಜ್ಜಯಿನಿಯ ಮಹಾಕಾಳೇಶ್ವರದಲ್ಲಿ ನಟಿ ಸಾರಾ ಅಲಿ ಖಾನ್: ನೆಟ್ಟಿಗರಿಂದ ತಕರಾರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಅಭಿನಯದ ‘ಝರಾ ಹಟ್ಕೆ ಝರಾ ಬಚ್ಕೆ’ ರಿಲೀಸ್ ಆಗಲು ಸಜ್ಜಾಗುತ್ತಿದ್ದಂತೆ ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದೀಗ ಈ ಭೇಟಿ ವಿರುದ್ಧ ಅಪಸ್ವರ ಕೇಳಿಬಂದಿದೆ . ಸಾರಾ ಆಗಾಗ ಹಿಂದು ದೇವಾಲಯಕ್ಕೆ ಭೇಟಿ ನೀಡಿ ಸುದ್ದಿ ಆಗುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ಕೇದಾರನಾಥಕ್ಕೆ ಹೋಗಿದ್ದರು. ಈಗ ಅವರು ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwara Temple) ಭೇಟಿ ಕೊಟ್ಟಿದ್ದಾರೆ.

ಗುಲಾಬಿ ಬಣ್ಣದ ಸಾಂಪ್ರದಾಯಿಕ ಉಡುಗೆ ಧರಿಸಿ ಕಾಣಿಸಿಕೊಂಡ ಅವರು ಅಲ್ಲಿನ ಪುರೋಹಿತರ ಜೊತೆ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಾರಾ, ದೇವಸ್ಥಾನಕ್ಕೆ ಭೇಟಿ ನೀಡಿರೋದ್ದಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇದೆಲ್ಲ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದ್ದಾರೆ.

ಸಾರಾ, ವಿಕ್ಕಿ ಕೌಶಲ್ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಸಾರಾ- ವಿಕ್ಕಿ ಕೌಶಲ್ ಅವರು ಜೋಡಿಯಾಗಿ ನಟಿಸಿದ್ದಾರೆ. ಜೂನ್ 2ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!