spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿನಿಮಾ ಶೂಟಿಂಗ್ ವೇಳೆ ಅವಘಡ: ನಟಿ ಶಾನ್ವಿ ಶ್ರೀವಾಸ್ತವಗೆ ಗಾಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಟಿ ಶಾನ್ವಿ ಶ್ರೀವಾಸ್ತವ ನಟಿಸುತ್ತಿರುವ ‘ಬ್ಯಾಂಗ್’​ ಸಿನಿಮಾ ಚಿತ್ರದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದ್ದು, ಸಾಹಸ ಸನ್ನಿವೇಶ ಚಿತ್ರೀಕರಣದ ವೇಳೆ ಶಾನ್ವಿ ಬಿದ್ದಿದ್ದಾರೆ. ಈ ವೇಳೆ ಅವರ ಕೈಗೆ ಪೆಟ್ಟಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಶೂಟಿಂಗ್​ ನಿಂತಿದೆ.
‘ಬ್ಯಾಂಗ್’ ಸಿನಿಮಾದಲ್ಲಿ ಶಾನ್ವಿ ಅವರದ್ದು ಗ್ಯಾಂಗ್‌ಸ್ಟರ್ ಪಾತ್ರ. ಈ ಸಿನಿಮಾದಲ್ಲಿ ಸಾಕಷ್ಟು ಆಯಕ್ಷನ್​ ಇದ್ದು, ಅದಕ್ಕಾಗಿಯೇ ಅವರು ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಮಳೆ ಎಫೆಕ್ಟ್‌ನಲ್ಲಿ ಶೂಟಿಂಗ್ ಮಾಡುವಾಗ ಶಾನ್ವಿ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಅವರ ಕೈಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ಈ ಚಿತ್ರಕ್ಕೆ ಶ್ರೀಗಣೇಶ್‌ ಪರಶುರಾಮ್ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ. ಗಾಯಕ ರಘು ದೀಕ್ಷಿತ್ ಡಾನ್ ಆಗಿ ‘ಬ್ಯಾಂಗ್‌’ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತ್ವಿಕ್ ಮುರಳೀಧರ್ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡುವುದರ ಜೊತೆಗೆ ಒಂದು ಪಾತ್ರವನ್ನೂ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆಯುತ್ತಿದ್ದಾರೆ. ಸಾಹಸ ನಿರ್ದೇಶನವನ್ನು ಚೇತನ್ ಮಾಡುತ್ತಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss