ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಇನ್ಸ್ಟಾಗ್ರಾಂನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ತಪ್ಪೊಂದು ಮಾಡಿದ್ದೇನೆ ಆದರೂ ಪರವಾಗಿಲ್ಲ ಎಂದು ಬರೆದುಕೊಂಡಿದ್ದಾರೆ.
ಶಿಲ್ಪಾ ಶೆಟ್ಟಿ ಮರಳಿ ತಮ್ಮ ಕೆಲಸಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ‘ಸೂಪರ್ ಡಾನ್ಸರ್ 4’ ರಿಯಾಲಿಟಿ ಶೋಗೆ ನಿರ್ಣಾಯಕರಾಗಿ ಮರಳಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗುತ್ತಿದ್ದಾರೆ.
ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಅಶ್ಲೀಲ ಚಿತ್ರ ತಯಾರಿಕೆ ಹಾಗೂ ಹಂಚಿಕೆಯ ಪ್ರಕರಣದಲ್ಲಿ ಬಂಧಿಸಿದ ನಂತರ ಶಿಲ್ಪಾ ಶೆಟ್ಟಿ ಮೌನ ತಾಳಿದ್ದರು. ಪ್ರಸ್ತುತ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಅವರು, ಇತ್ತೀಚೆಗೆ ಓದಿದ ಪುಸ್ತಕವೊಂದರ ಪುಟವನ್ನು ಹಂಚಿಕೊಂಡು ಅದಕ್ಕೆ ಕ್ಯಾಪ್ಶನ್ ನೀಡಿದ್ದಾರೆ. ಶಿಲ್ಪಾ ನೀಡಿದ ಈ ಕ್ಯಾಪ್ಶನ್ ಈಗ ಕುತೂಹಲಕ್ಕೆ ಕಾರಣವಾಗಿದೆ.
ಶಿಲ್ಪಾ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯ ಮುಖಾಂತರ ಒಂದು ಚಿತ್ರವನ್ನು ಹಂಚಿಕೊಂಡಿದ್ದು, ಅದರಲ್ಲಿ ಸೋಫಿಯಾ ಲಾರೆನ್ಸ್ ಅವರ ಬರಹವೊಂದರ ಭಾಗವನ್ನು ಹಂಚಿಕೊಂಡಿದ್ದಾರೆ. ತಪ್ಪುಗಳು ಜೀವನದ ಭಾಗ ಎಂಬರ್ಥದಲ್ಲಿ ಪೋಸ್ಟ್ ಹಂಚಿಕೊಂಡಿರುವ ಶಿಲ್ಪಾ ಶೆಟ್ಟಿ ಅದಕ್ಕೆ, ತಪ್ಪು ಮಾಡಿದ್ದೇನೆ, ಆದರೂ ಪರವಾಗಿಲ್ಲ ಎಂದು ಬರೆದುಕೊಂಡಿದ್ದಾರೆ. ಅವರ ಯಾವ ಉದ್ದೇಶಕ್ಕೆ ಹೀಗೆ ಬರೆದುಕೊಂಡಿದ್ದಾರೆ ಎಂದು ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.