ಹುಟ್ಟೂರಿಗೆ ನಟಿ ಶೋಭಿತಾ ಮೃತದೇಹ ಆಗಮನ, ಇಂದು ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ನಟಿ ಶೋಭಿತಾ ಮೃತದೇಹವನ್ನ ಹುಟ್ಟೂರಾದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮಕ್ಕೆ ತರಲಾಗಿದೆ.

ಶೋಭಿತಾ ನಿವಾಸದೆದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೆರೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಶೋಭಿತಾ ಮೃತದೇಹ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಡೀ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಇಂದೇ ಶೋಭಿತಾ ಅಂತ್ಯಕ್ರಿಯೆ ನಡೆಯಲಿದೆ. ಕಳೆದ ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ತಾಯಿ, ಮೂವರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!