ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಶ್ರುತಿ ಹರಿಹರನ್ ಕೇಸ್: ತಡೆಯಾಜ್ಞೆ ನೀಡಿದ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಸ್ಮಯ ಸಿನಿಮಾ ಶೂಟಿಂಗ್ ವೇಳೆ ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಲಾಗಿದೆ ಎಂದು ನಟಿ ಶ್ರುತಿ ಹರಿಹರನ್ ಆರೋಪಕ್ಕೆ ಸಂಬಂಧಿಸಿದಂತೆ ನಟನ ಪರವಾಗಿ ಪ್ರಶಾಂತ್ ಸಂಬರಗಿ ನಾನಾ ಹೇಳಿಕೆಗಳನ್ನು ನೀಡಿದ್ದರು. ಈ ವೇಳೆ ಪ್ರಶಾಂತ್ ತಮ್ಮ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಪ್ರಸಂಬಂಧ ಪ್ರಶಾಂತ್ ಸಂಬರಗಿ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ನಲ್ಲಿ ನಡೆಯುತ್ತಿರುವ ಈ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಪೀಠ, ಸಂಬರಗಿ ವಿರುದ್ಧ ಪ್ರಕರಣಕ್ಕೆ ಮುಂದಿನ ವಿಚಾರಣೆವರೆಗೂ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಈ ವಿಚಾರಣೆಯನ್ನು 2023ರ ಫೆಬ್ರುವರಿ 1ಕ್ಕೆ ಮುಂದೂಡಿದೆ.

ಶ್ರುತಿ ಹರಿಹರನ್ ಮಾಡಿದ್ದ ಆರೋಪದ ಕುರಿತಂತೆ 2018ರ ಅಕ್ಟೋಬರ್ 25ರಂದು ವಾಣಿಜ್ಯ ಮಂಡಳಿಯಲ್ಲಿ ಸಂಧಾನ ಸಭೆ ನಡೆದಿತ್ತು. ಹಿರಿಯ ನಟ ಅಂಬರೀಶ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಶ್ರುತಿ ಹರಿಹರನ್ ಮತ್ತು ನಟನಿಗೆ ಆಪ್ತರಾಗಿದ್ದ ಸಂಬರಗಿ ಹಾಜರಿದ್ದರು. ನಂತರ ತನ್ನ ವಿರುದ್ಧ ಮಾಧ್ಯಮಗಳಲ್ಲಿ ಸಂಬರಗಿ ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿದ್ದರು. ದೂರು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!