ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ತಂದೆಯ ನಿಧನದ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ . ಇದನ್ನು ನಾನು 4 ದಿನಗಳ ಹಿಂದೆ ಕ್ಲಿಕ್ಕಿಸಿದ ಫೋಟೋ ಎಂದು ಬರೆದುಕೊಂಡಿದ್ದಾರೆ.
ಅವರು ಬ್ಯಾಂಕರ್, ವಕೀಲ, ಬರಹಗಾರ, ನಾಟಕಕಾರ, ಸಾಹಿತ್ಯ ಮತ್ತು ವೇದಗಳಲ್ಲಿ ಆಳವಾದ ಜ್ಞಾನವನ್ನು ಹೊಂದಿರುವ ವಿದ್ವಾಂಸರಾಗಿದ್ದರು. ಅವರು ನನ್ನ ತಂದೆ ಮಾತ್ರವಲ್ಲ ಗುರು ಕೂಡ ಆಗಿದ್ದರು. ನನ್ನನ್ನು ಮತ್ತು ನನ್ನ ಸಹೋದರಿಯನ್ನು ಸಿಂಹಿಣಿಯಂತೆ ಬೆಳೆಸಿದ್ದರು ಎಂದು ನಟಿ ಭಾವುಕರಾಗಿದ್ದಾರೆ. ನಟೇಶನ್ ಗಣೇಶನ್ ಸದಾ ನಮ್ಮ ಹೃದಯದಲ್ಲಿರುತ್ತಾರೆ ಎಂದು ನಟಿ ಬರೆದುಕೊಂಡಿದ್ದಾರೆ.