ಉಪೇಂದ್ರ ನಿರ್ದೇಶನದ ‘ಯುಐ’ ಚಿತದಲ್ಲಿ ನಟಿ ಸನ್ನಿ ಲಿಯೋನ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸುತ್ತಿರುವ ‘ಯುಐ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೇ ನಡೆಯುತ್ತಿದ್ದು, ಅನೇಕ ತಾರಾಗಣ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇದೀಗ ಈ ಲಿಸ್ಟ್ ಗೆ ಮತ್ತೊಂದು ಹೆಸರು ಸೇರ್ಪಡೆಯಾಗಿದ್ದು, ಅವರೇ ಬಾಲಿವುಡ್ ನಟಿ ಸನ್ನಿ ಲಿಯೋನ್.

ಈ ಸಿನಿಮಾದಲ್ಲಿ ಸನ್ನಿ ಲಿಯೋನ್ ಅವರು ಪ್ರಮುಖ ಪಾತ್ರವೊಂದನ್ನು ಮಾಡಿದ್ದು, ಅವರ ಭಾಗದ ಶೂಟಿಂಗ್ ಕೂಡ ಮುಗಿದಿದೆ ಎನ್ನಲಾಗುತ್ತಿದೆ. ಈ ಮೂಲಕ ಮತ್ತೆ ಸನ್ನಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಯುಐನಲ್ಲಿ ಪ್ರಮುಖ ಪಾತ್ರವನ್ನೇಸನ್ನಿ ಲಿಯೋನ್ ಮಾಡುತ್ತಿದ್ದು, ಬೆಂಗಳೂರಿನಲ್ಲಿ ಶೂಟಿಂಗ್ ನಡೆದಿದೆ. ಈ ಸಿನಿಮಾದಲ್ಲಿ ತುಂಬಾ ಹೊತ್ತು ಸ್ಕ್ರೀನ್ ಮೇಲೆ ಇರುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತಾಗಿ ಸಿನಿಮಾ ರಂಗ ಯಾವುದೇ ಮಾಹಿತಿ ನೀಡಿಲ್ಲ.

ಹಲವು ವರ್ಷಗಳ ನಂತರ ಉಪೇಂದ್ರ ಮತ್ತೆ ನಿರ್ದೇಶನ ಮಾಡುತ್ತಿದ್ದು, ಅಪರೂಪದ ಕಥೆಯೊಂದನ್ನು ಈ ಚಿತ್ರಕ್ಕಾಗಿ ಹೆಣೆದಿದ್ದಾರೆ. ನೂರಕ್ಕೂ ಹೆಚ್ಚು ಕಲಾವಿದರು ಈ ಸಿನಿಮಾದಲ್ಲಿ ಇರುವುದು ಮತ್ತೊಂದು ವಿಶೇಷ. ಈಗಾಗಲೇ ಸಿನಿಮಾದ ಪೋಸ್ಟರ್, ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು, ಸಾಕಷ್ಟು ಕುತೂಹಲ ಕೂಡ ಮೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!