ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಹಾಸನದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಶೂಟಿಂಗ್‌ಗಾಗಿ ಸನ್ನಿ ಕರ್ನಾಟಕಕ್ಕೆ ಆಗಮಿಸಿದ್ದು, ಅಭಿಮಾನಿಗಳು ಫೋಟೊ ಕ್ಲಿಕ್ಕಿಸಿಕೊಳ್ಳೋದಕ್ಕೆ ಮುಗಿಬಿದ್ದಿದ್ದಾರೆ.
ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಕಬ್ಬಳಿ ಗ್ರಾಮದಲ್ಲಿ ಸನ್ನಿ ಲಿಯೋನ್ ಭಾಗಿಯಾಗಿದ್ದಾರೆ. ಕಬ್ಬಳಿ ಗ್ರಾಮಕ್ಕೆ ಆಗಮಿಸಿದ ಸನ್ನಿ, ಶಾಲೆಯಲ್ಲಿ ಶೂಟಿಂಗ್ ನಡೆಸಿದ್ದಾರೆ. ಬಳಿಕ ತರಗತಿಗೂ ಭೇಟಿ ನೀಡಿ ಅಲ್ಲಿನ ಮಕ್ಕಳ ಜೊತೆ ನಟಿ ಕಾಲ ಕಳೆದಿದ್ದಾರೆ.
ಇದೇ ವೇಳೆ, ಮಕ್ಕಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಕಪ್ಪು ಬಣ್ಣ ಟೀ ಶರ್ಟ್ ಮತ್ತು ಪ್ಯಾಂಟ್‌ಗೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದಾರೆ.