ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರಾಠಿ ನಟಿ ಊರ್ಮಿಳಾ ಕೊಠಾರೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ .
ಊರ್ಮಿಳಾ ಕೆಲಸದಿಂದ ಹಿಂದಿರುಗುತ್ತಿದ್ದಾಗ ಮುಂಬೈನ ಪೊಯಿಸರ್ ಮೆಟ್ರೋ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಇಬ್ಬರು ಮೆಟ್ರೋ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನ ಏರ್ ಬ್ಯಾಗ್ ಗಳನ್ನು ಸಮಯೋಚಿತವಾಗಿ ನಿಯೋಜಿಸಿದ್ದರಿಂದ ನಟಿನನ್ನು ಉಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.