ಇಂಡಿಯಾ-ಪಾಕ್​ ಕ್ರಿಕೆಟ್‌ ಮ್ಯಾಚ್​ ನಲ್ಲಿ ಚಿನ್ನದ ಐಫೋನ್​ ಕಳೆದುಕೊಂಡ ನಟಿ ಊರ್ವಶಿ ರೌಟೇಲಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಹಮದಾಬಾದ್​ನ ನರೇಂದ್ರಮೋದಿ ಸ್ಟೇಡಿಯಂನಲ್ಲಿ ಶನಿವಾರ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಇದಕ್ಕೆ ಕಾರಣ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್​ ಪಂದ್ಯಾವಳಿ.

ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿಗೆ ಭಾರತೀಯರೆಲ್ಲರೂ ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಆದ್ರೆ ಈ ನಡುವೆ ಬಾಲಿವುಡ್​ ಖ್ಯಾತ ನಟಿ ಊರ್ವಶಿ ರೌಟೇಲಾ (Uravashi Rautela) ಮಾತ್ರ ಯಾಕೋ ಬೇಸರದಲ್ಲಿ ಇದ್ದರು.

ಹೌದು, ನೀಲಿ ಬಣ್ಣದ ಡ್ರೆಸ್​​ ಧರಿಸಿ ಭಾರತ ಕ್ರಿಕೆಟ್​ ತಂಡವನ್ನು ಬೆಂಬಲಿಸಲು ಬಂದಿದ್ದ ಊರ್ವಶಿ ರೌಟೇಲಾ ಭಾರತ ಗೆದ್ದ ಖುಷಿಯಲ್ಲಿ ಬೀಗುತ್ತಿದ್ದರು. ಆದರೆ ಇದೇ ವೇಳೆ ತಮ್ಮ ಚಿನ್ನದ ಐಫೋನ್ ಅನ್ನು ಕಳೆದುಕೊಂಡಿದ್ದಾರಂತೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ನನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡೆಯುವಾಗ ಕಳೆದುಕೊಂಡಿದ್ದೇನೆ. ದಯವಿಟ್ಟು ಸಹಾಯ ಮಾಡಿ, ಯಾರಿಗಾದರೂ ಮೊಬೈಲ್ ಸಿಕ್ಕರೆ ಮರಳಿಸಿ, ಅಥವಾ ನನ್ನನ್ನು ಸಂಪರ್ಕಿಸಿ ಎಂದು ಊರ್ವಶಿ ಬರೆದುಕೊಂಡಿದ್ದಾರೆ.

ತಮ್ಮ ಈ ಪೋಸ್ಟ್ ಅನ್ನು ಅಹಮದಾಬಾದ್ ಪೊಲೀಸರಿಗೆ ಹಾಗೂ ನರೇಂದ್ರ ಮೋದಿ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಟ್ಯಾಗ್ ಮಾಡಿದ್ದಾರೆ.

ಊರ್ವಶಿ ರೌಟೇಲಾ ಸುಳ್ಳು ಹೇಳುತ್ತಿದ್ದಾರೆ. ಇದೊಂದು ಪ್ರಚಾರ ಪಡೆಯುವ ತಂತ್ರ ಎಂದು ಕೆಲವರು ಆರೋಪ ಮಾಡಿದ್ದಾರೆ. ಚಿನ್ನದ ಫೋನು ಸಿಕ್ಕವರು ಯಾರಾದರೂ ವಾಪಸ್ ಕೊಡುತ್ತಾರೆಯೇ ಎಂದು ನಟಿಗೆ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಚಿನ್ನದ ಫೋನು ಸಿಕ್ಕಿದವನು ಅದೃಷ್ಟ ಮಾಡಿದ್ದಾನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!