ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಹುಲ್ ನವ್ಲಾನಿಯನ್ನು ಇಂದೋರ್ ಪೊಲೀಸರು ಬಂಧಿಸಿದ್ದಾರೆ. ವೈಶಾಲಿ ಠಕ್ಕರ್ ಮಧ್ಯಪ್ರದೇಶದ ಇಂದೋರ್ ನಗರದ ಸಾಯಿಬಾಬಾ ಕಾಲೋನಿಯಲ್ಲಿ ಇರುವ ತಮ್ಮ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ರಾಹುಲ್ ಹಾಗೂ ಆತನ ಪತ್ನಿ ದಿಶಾ ಠಕ್ಕರ್‌ಗೆ ಕಿರುಕುಳ ನೀಡುತ್ತಿದ್ದರು ಎಂದು ವೈಶಾಲಿ ತಮ್ಮ ಡೆತ್‌ನೋಟ್‌ನಲ್ಲಿ ಬರೆದಿದ್ದರು. ರಾಹುಲ್ ಹಾಗೂ ದಿಶಾ ಬಗ್ಗೆ ಮಾಹಿತಿ ನೀಡಿದವರಿಗೆ ಐದು ಸಾವಿರ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಇಂದೋರ್‌ನಿಂದ ಎಸ್ಕೇಪ್ ಆಗುವ ವೇಳೆ ರಾಹುಲ್ ಸಿಕ್ಕಿಬಿದ್ದಿದ್ದು, ವಿಚಾರಣೆ ನಡೆಯುತ್ತಿದೆ. ದಂಪತಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ.