ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ ವಿವಾದ ವಿವಿಧ ಆಯಾಮ ಪಡೆಯುತ್ತಿದ್ದು, ಇದೀಗ ಘಟನೆ ಕುರಿತು ಪೊಲೀಸ್ ಆಯುಕ್ತರಿಗೆ ನಟ ವಿಧ್ಯಾಭರಣ್ ದೂರು ನೀಡಿದ್ದಾರೆ.
ಆಡಿಯೋದಲ್ಲಿ ತಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಆಡಲಾಗಿದೆ. ಅವರು ಯಾರು ಎನ್ನುವುದು ನನಗೆ ಗೊತ್ತಿಲ್ಲ. ಅವರ ಮಾತುಗಳಿಂದಾಗಿ ತಮಗೂ ಮತ್ತು ತಮ್ಮ ಕುಟುಂಬಕ್ಕೂ ಮುಜುಗರ ಉಂಟಾಗಿದೆ. ಆಡಿಯೋದಲ್ಲಿ ಮಾತನಾಡಿದವರು ಯಾರು ಎಂಬುದನ್ನು ಪತ್ತೆ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ನಟಿ ವೈಷ್ಣವಿ ಗೌಡ ಮತ್ತು ನಟ ವಿದ್ಯಾಭರಣ್ ಇಬ್ಬರೂ ಪ್ರತ್ಯೇಕ ಹೇಳಿಕೆಗಳನ್ನು ನೀಡಿದ್ದು, ಅದು ನಿಶ್ಚಿತಾರ್ಥ ಅಲ್ಲ, ಕೇವಲ ಹಣ್ಣು ಕಾಯಿ ಇಡುವ ಶಾಸ್ತ್ರ ಎಂದು ಸ್ಪಷ್ಟ ಪಡಿಸಿದ್ದಾರೆ.