ನಟಿ ವೈಜಯಂತಿಮಾಲಾ, ಚಿರಂಜೀವಿ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ, ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಸಮಾಚಾರ ಪತ್ರಿಕೆ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ, ಬಿಜೆಪಿ ನಾಯಕ ಓ ರಾಜಗೋಪಾಲ್, ಲಡಾಖ್‌ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ “ಕ್ಯಾಪ್ಟನ್” ವಿಜಯಕಾಂತ್ , ಗುಜರಾತಿ ಪತ್ರಿಕೆ “ಜನ್ಮಭೂಮಿ” ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. .

90 ವರ್ಷದ ವೈಜಯಂತಿ ಮಾಲಾ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿದರೆ, ಬೀವಿ, ಕಾಮ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬದ ಸದಸ್ಯರು ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. 2024 ರಲ್ಲಿ ಐದು ಪದ್ಮ ವಿಭೂಷ, 17 ಪದ್ಮ ಭೂಷಣ ಮತ್ತು 110 ಪದ್ಮ ಪ್ರಶಸ್ತಿ ಸೇರಿದಂತೆ ಒಟ್ಟಾರೇ 132 ಪ್ರಶಸ್ತಿಗಳನ್ನು ರಾಷ್ಟ್ರಪತಿ ಘೋಷಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!