ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಮುಂದಾಗಿರುವ ಬೆನ್ನಲೇ ಈ ಬೆಳವಣಿಗೆ ನಡೆದಿರುವುದು ಅನೇಕ ಚರ್ಚೆಗೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಂಡಿದೆ. ಇದು ಜನಾದೇಶ, ಇದನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಅಂತ ಅವರು ಹೇಳಿದ್ದಾರೆ.
ಇದೇ ವೇಳೆ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ಎಲ್ಲರಿಗೆ ನನ್ನ ಹೃದಯಪೂರ್ವಕ ವಂದನೆಗಳನ್ನು ಸಲ್ಲಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.