ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಹೊಣೆ ಹೊತ್ತ ಅದಾನಿ ಗ್ರೂಪ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಒಡಿಶಾ ರೈಲು ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳಲಿದೆ ಎಂದು ಕೈಗಾರಿಕೋದ್ಯಮಿ ಗೌತಮ್ ಅದಾನಿ ಭಾನುವಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಗೌತಮ್ ಅದಾನ ‘ಒರಿಸ್ಸಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರ ದುಃಖಿತರಾಗಿದ್ದೇವೆ. ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮುಗ್ಧರ ಶಾಲಾ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳಲು ನಾವು ನಿರ್ಧರಿಸಿದ್ದೇವೆ’ ಎಂದು ತಿಳಿಸಿದರು.

‘ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಹೇಳಿದರು.

https://twitter.com/gautam_adani/status/1665319913790279680?cxt=HHwWgMDUre3os5wuAAAA

ಒರಿಸ್ಸಾ ರೈಲು ಅಪಘಾತದ ಸಾವನ್ನಪ್ಪಿದವರ ಸಂಖ್ಯೆಯನ್ನು 275 ಕ್ಕೆ ಏರಿದೆ ಎಂದು ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಭಾನುವಾರ ತಿಳಿಸಿದ್ದಾರೆ.ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟ 275 ಮೃತದೇಹಳಗ ಪೈಕಿ 88 ಶವಗಳನ್ನು ಗುರುತಿಸಲಾಗಿದೆ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!