ಅದಾನಿ ಗ್ರೂಪ್ ಸಂಕಷ್ಟ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅದಾನಿ ಗ್ರೂಪ್ ಸ್ಟಾಕ್‌ಗಳು ನಿರಂತರವಾಗಿ ಇಳಿಕೆ ಕಾಣುತ್ತಿದೆ. ಈ ನಡುವೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮತ್ತು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಅಧಿಕವಾಗಿ ಅದಾನಿ ಸಂಸ್ಥೆಗೆ ಸಾಲ ನೀಡಿದೆ, ಈ ಸಂಸ್ಥೆಗಳು ಅಪಾಯದಲ್ಲಿದೆ ಎಂದು ವರದಿಯಾಗಿದ್ದವು.ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಣೆಯನ್ನು ನೀಡಿದ್ದಾರೆ.

ಎಸ್‌ಬಿಐ ಆಗಲಿ ಅಥವಾ ಎಲ್‌ಐಸಿ ಆಗಲಿ ಅದಾನಿ ಗ್ರೂಪ್‌ಗೆ ಹೆಚ್ಚಿನ ಸಾಲವನ್ನು ನೀಡಿಲ್ಲ. ದೇಶದ ಅತೀ ದೊಡ್ಡ ಬ್ಯಾಂಕ್‌ ಆದ ಎಸ್‌ಬಿಐ ಮತ್ತು ದೇಶದ ಅತೀ ದೊಡ್ಡ ವಿಮಾ ಸಂಸ್ಥೆಯಾದ ಎಲ್‌ಐಸಿ ಈ ಬಗ್ಗೆ ಈಗಾಗಲೇ ವಿವರವಾದ ಮಾಹಿತಿಯನ್ನು ನೀಡಿದೆ. ಎರಡೂ ಸಂಸ್ಥೆಗಳು ನಿಯಮಕ್ಕೆ ಅನುಗುಣವಾಗಿ, ಲಾಭಕ್ಕೆ ಅನುಗುಣವಾಗಿ ಅದಾನಿ ಗ್ರೂಪ್‌ ಜೊತೆ ವಹಿವಾಟು ಹೊಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತವು ಉತ್ತಮವಾದ ನಿಯಮಗಳನ್ನು ಮತ್ತು ಉತ್ತಮವಾದ ಸರ್ಕಾರಿಸ್ವಾಮ್ಯದ ಹಣಕಾಸು ಮಾರುಕಟ್ಟೆಯನ್ನು ಹೊಂದಿದೆ ಎಂದರು.

ಹಿಂಡನ್‌ಬರ್ಗ್ ವರದಿಯಾದ ಬಳಿಕ ಎಲ್‌ಐಸಿ ಮತ್ತು ಎಸ್‌ಬಿಐ ಅಪಾಯದಲ್ಲಿದೆ, ದೇಶದ ಜನರ ಹೂಡಿಕೆ ಅಪಾಯದಲ್ಲಿದೆ ಎಂದು ವಿಪಕ್ಷ ನಾಯಕರುಗಳು ಆರೋಪ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!