Thursday, March 23, 2023

Latest Posts

ಅದಾನಿ-ಹಿಂಡೆನ್‍ಬರ್ಗ್ ರಿಪೋರ್ಟ್: ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂ ಕೋರ್ಟ್ ನಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅದಾನಿ-ಹಿಂಡೆನ್ಬರ್ಗ್ ವಿಷಯದ ಕುರಿತು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಹಿಂಡೆನ್‍ಬರ್ಗ್ ರಿಪೋರ್ಟ್ ಹೊರಬಿದ್ದ ಬಳಿಕ ಅದಾನಿ ಗ್ರೂಪ್ ಷೇರುಗಳ ಕುಸಿತದ ಕುರಿತು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಫೆಬ್ರವರಿ 20 ರಂದು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಇದೀಗ ಇಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಈ ವಿಷಯವನ್ನು ಪ್ರಸ್ತಾಪಿಸಿದ ವಕೀಲ ಎಂ ಎಲ್ ಶರ್ಮಾ ಅವರ ಮನವಿಯನ್ನು ತಿರಸ್ಕರಿಸಿತು. ನಾವು ಮಾಧ್ಯಮಗಳಿಗೆ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ ಎಂದು ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!