November 6, 2026
Friday, November 6, 2026
spot_img

ಬರದ ಮೇಲೆ ಬರೆ! ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸಲು CWRC ಶಿಫಾರಸು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬರದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ಎದುರಾಗಿದೆ. ಕುಡಿಯಲೂ ನೀರಿಲ್ಲದೇ ಇರುವ ಪರಿಸ್ಥಿತಿಯ ನಡುವೆ ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.

ದೆಹಲಿಯಲ್ಲಿಂದು ನಡೆಸಿದ ಸಭೆಯ ಬಳಿಕ, ನಿತ್ಯ 3,000 ಕ್ಯೂಸೆಕ್‌ನಂತೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವಂತೆ ಸಮಿತಿ ಶಿಫಾರಸ್ಸು ಮಾಡಿದೆ. ಇದು ರಾಜ್ಯದ ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಕಳೆದ ಅಕ್ಟೋಬರ್ 23ರಿಂದ ಕರ್ನಾಟಕವು ಕಾವೇರಿ ನದಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದ್ದರೂ, ಕರ್ನಾಟಕ ನೀರು ಹರಿಸಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಮಾಡಿ ಮಾಡಿತ್ತು.

ಕಾವೇರಿ ನೀರು ಹರಿಸದ ಕಾರಣ 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ತಮಿಳುನಾಡು ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಕಾವೇರಿ ವಿವಾದದ ವಿಚಾರಣೆಯನ್ನ ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ತಮಿಳುನಾಡು ಮನವಿ ಮಾಡಿತ್ತು. ಮನವಿಯನ್ನು ಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠ ಭರವಸೆ ಕೊಟ್ಟಿತ್ತು. ಈ ಬೆನ್ನಲ್ಲೇ ಕಾವೇರಿ ನೀರು ನಿಯಂತ್ರಣ ಸಮಿತಿ ನೀರು ಹರಿಸುವಂತೆ ಶಿಫಾರಸು ಮಾಡಿದೆ.

Must Read