ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಸೇರ್ಪಡೆ: IOC ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2028ಕ್ಕೆ ಅಮೆರಿಕದ ಲಾಸ್‌ ಏಂಜಲಿಸ್‌ನಲ್ಲಿ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ (Olympics Games) ಕ್ರಿಕೆಟ್‌ (Cricket)ಸೇರ್ಪಡೆಯಾಗಿದೆ.

ಈ ಕುರಿತು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (IOC) ನಿರ್ವಾಹಕರು ಒಲಿಂಪಿಕ್ಸ್‌ ಕ್ರೀಡೆಯಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಿರುವುದಾಗಿ ಘೋಷಣೆ ಮಾಡಿದ್ದಾರೆ.

ಮುಂಬೈನಲ್ಲಿ ಒಲಿಂಪಿಕ್ಸ್‌ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆ ನಡೆದ 2 ದಿನಗಳ ಬಳಿಕ ಮಾತನಾಡಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಅಧ್ಯಕ್ಷ, ಥಾಮಸ್ ಬಾಚ್, ಬೇಸ್‌ಬಾಲ್/ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್ (Flag football) ಜೊತೆಗೆ 5 ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ ಕ್ರಿಕೆಟ್‌ ಸಹ ಒಂದು. ಕ್ರಿಕೆಟ್‌ ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನು ಲಾಸ್‌ ಏಂಜಲಿಸ್‌ನ ಸಂಘಟಕ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂಬುದಾಗಿಯೂ ತಿಳಿಸಿದ್ದಾರೆ.

2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!