ಹೆಚ್ಚುವರಿ ಡಿಸಿಎಂ ವಿಚಾರ: ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ ಎಂದ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು,ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿ’ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!