ಗ್ಯಾರೆಂಟಿಗಳ ಸಮರ್ಪಕ ಅನುಷ್ಠಾನ ಆಗಲೇಬೇಕು, ಜು.4ರಂದು ಬೃಹತ್ ಸತ್ಯಾಗ್ರಹ: ಬಿಎಸ್‌ವೈ

ಹೊಸದಿಗಂತ ವರದಿ ಬೆಂಗಳೂರು:

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು.

ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು; ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1500 ರೂ. ಕೊಡಬೇಕು, 200 ಯೂನಿಟ್ ಕರೆಂಟ್ ಕೊಡಲೇಬೇಕು, 80 ಯೂನಿಟ್ ಎಂಬ ಕಂಡಿಷನ್ ರದ್ದು ಮಾಡಬೇಕೆಂದು ಆಗ್ರಹಿಸಿದರು.

ಅವರೇ ಭರವಸೆ ನೀಡಿದಂತೆ ಎಲ್ಲ ಮಹಿಳೆಯರಿಗೆ 2 ಸಾವಿರ ರೂ. ಕೊಡಬೇಕು. ಕರೆಂಟ್ ಬಿಲ್ ತೀವ್ರವಾಗಿ ಹೆಚ್ಚಾಗಿದ್ದು, ದರ ಏರಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದರು. 4ರಂದು ಸದನದ ಒಳಗೆ ಮತ್ತು ಹೊರಗಡೆ ನಾನು ಮತ್ತು ಪಕ್ಷದ ಪ್ರಮುಖರು ಧರಣಿ ನಡೆಸಲಿದ್ದೇವೆ ಎಂದು ವಿವರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!