ಎಡಿಜಿಪಿ ಅಮೃತ್ ಪಾಲ್ ಬಂಧನ: ಸಿಎಂ ಬೊಮ್ಮಾಯಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಗೆ ಮುಕ್ತ ಅವಕಾಶ ನೀಡಿದ್ದರಿಂದಾಗಿ ಎಡಿಜಿಪಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಬ್ಬನ್ ಪಾರ್ಕ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಐಡಿಗೆ ಸರ್ಕಾರ ಮುಕ್ತವಾದ ಅವಕಾಶ ನೀಡಿದೆ. ಹೀಗಾಗಿ ಸಾಕ್ಷ್ಯಾಧಾರಗಳ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಪ್ರಕರಣದಲ್ಲಿ ಎಷ್ಟೇ ದೊಡ್ಡವರು ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಾನು ಈ ಮೊದಲೇ ಹೇಳಿದ್ದೆ. ನಮ್ಮ ಸರ್ಕಾರವಾಗಿರುವ ಕಾರಣ ಎಡಿಜಿಪಿ ಹುದ್ದೆಯಲ್ಲಿನ ಹಿರಿಯ ಅಧಿಕಾರಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಎಡಿಜಿಪಿ ಬಂಧನದಿಂದ ಇಲ್ಲಿ ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆ ಉದ್ಭವವಾಗುವುದಿಲ್ಲ. ತನಿಖೆ ಮಾಡಿಸಿದ್ದೇ ನಾವು, ಅದೇ ಬೇರೆ ಸರ್ಕಾರ ಇದ್ದಿದ್ದರೆ ಹೀಗಾಗುತ್ತಿರಲಿಲ್ಲ. ಈ ಹಿಂದೆ ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಾಗ ಯಾವುದೇ ತನಿಖೆ ಆಗಿರಲಿಲ್ಲ. ಆದರೆ ನಾವು ನಿಷ್ಪಕ್ಷಪಾತವಾಗಿ, ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸುತ್ತಿದ್ದೇವೆ. ಅಕ್ರಮ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸುತ್ತೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!