Thursday, August 11, 2022

Latest Posts

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.
ಭಾಸ್ಕರರಾವ್ ಅವರು ಗೃಹ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ ಅವರು ಸ್ವಯಂ ನಿವೃತ್ತಿ ಪಡೆಯಲು ಮುಂದಾಗಿರುವುದು ಏಕೆ ಎಂಬುದು ನಿಗೂಢವಾಗಿದ್ದರೂ ಕೂಡ ಹಲವು ಅನುಮಾನಗಳು ಮೂಡಿಸಿವೆ.
ನಿವೃತ್ತಿ ಬಳಿಕ ಹಿರಿಯ ಐಪಿಎಸ್ ಅಧಿಕಾರಿ ರಾಜಕೀಯ ಪ್ರವೇಶಿಸುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.
ಕಾಂಗ್ರೆಸ್‌ ಸೇರ್ಪಡೆ ಸಾಧ್ಯತೆ?ಭಾಸ್ಕರ್‌ ರಾವ್ ಕಾಂಗ್ರೆಸ್ ಪಕ್ಷ ಸೇರಿ, ಬಸವನಗುಡಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ರಾವ್ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಕಳೆದ ವರ್ಷ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss