ಬಿಜೆಪಿ ಆಕ್ರೋಶಕ್ಕೆ ಮಣಿದ ಅಧೀರ್‌ ಚೌಧರಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ಕ್ಷಮೆಯಾಚಿಸಿದ ಕಾಂಗ್ರೆಸ್ ನಾಯಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ನೀಡಿರುವ ಹೇಳಿಕೆಗೆ ತೀವ್ರ ವಿವಾದ ಉಂಟಾದ ಬೆನ್ನೆಲ್ಲೇ ರಾಷ್ಟ್ರಪತಿಯ ಕ್ಷಮೆಯಾಚಿಸುವುದಾಗಿ ಅಧೀರ್ ರಂಜನ್ ಹೇಳಿದ್ದಾರೆ.

ಅಧೀರ್ ರಂಜನ್ ಚೌಧರಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರನ್ನ ‘ರಾಷ್ಟ್ರೀಯ ಪತ್ನಿ’ ಎಂದು ಕರೆದಿದ್ದರು. ಕಾಂಗ್ರೆಸ್ ಮತ್ತು ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ರಾಷ್ಟ್ರಪತಿಯವರನ್ನು ಅವಮಾನಿಸುವ ಬಗ್ಗೆ ಆಲೋಚನೆಯನ್ನು ಸಹ ನಾನು ಮಾಡಿಲ್ಲ. ತಪ್ಪಾಗಿದೆ. ರಾಷ್ಟ್ರಪತಿ ಅವರಿಗೆ ನೋವಾಗಿದ್ದರೆ, ವೈಯಕ್ತಿವಾಗಿ ಭೇಟಿಯಾಗಿ ಕ್ಷಮೆ ಕೇಳುತ್ತೇನೆ’ ಎಂದು ತಿಳಿಸಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಕಾಂಗ್ರೆಸ್ʼನ್ನ ಬುಡಕಟ್ಟು ವಿರೋಧಿ, ಮಹಿಳಾ ವಿರೋಧಿ ಮತ್ತು ಬಡವರ ವಿರೋಧಿ ಎಂದು ಕರೆದಿದ್ದರು. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಕೂಡ ಅವ್ರನ್ನ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿಯು ಈ ವಿವಾದದಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಎಳೆದು ತರುತ್ತಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವ ಚೌಧರಿ, ‘ಅವರು ಬಯಸುವುದಾದರೆ, ನನ್ನನ್ನು ನೇಣಿಗೇರಿಸಲಿ. ನಾನು ಶಿಕ್ಷೆ ಅನುಭವಿಸಲು ಸಿದ್ಧ. ಆದರೆ, ಅವರನ್ನು (ಸೋನಿಯಾ ಗಾಂಧಿ) ಈ ವಿಚಾರದಲ್ಲಿ ಎಳೆದು ತರುತ್ತಿರುವುದು ಏಕೆ?’ ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!