Sunday, August 14, 2022

Latest Posts

ಆದಿ ಚುಂಚನಗಿರಿ ಶ್ರೀಕ್ಷೇತ್ರಕ್ಕೆ ಡಿಸಿಎo ಡಾ.ಅಶ್ವತ್ಥನಾರಾಯಣ ಭೇಟಿ, ವಿಶೇಷ ಪೂಜೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ನಾಗಮಂಗಲ:

ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನಮಠಕ್ಕೆ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಭೇಟಿ ಕೊಟ್ಟು ಕ್ಷೇತ್ರದ ಶ್ರೀ ಕಾಲಭೈರವೇಶ್ವರಸ್ವಾಮಿ ದೇಗುಲದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಿರ್ಮಲಾನಂದನಾಥಶ್ರೀಗಳ ಆರ್ಶೀವಾದ ಪಡೆದುಕೊಂಡರು.
ಕ್ಷೇತ್ರಕ್ಕೆ ಭೇಟಿಕೊಟ್ಟ ಡಿಸಿಎಂ ಅಶ್ವತ್ಥನಾರಾಯಣ ಅವರನ್ನು ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಅವರು ಶ್ರೀಮಠದ ಸಂಪ್ರದಾಯದಂತೆ ಏಲಕ್ಕಿ ಹಾರ ಹಾಕಿ ಶಾಲು ಹೊದಿಸಿ ಫಲತಾಂಬೂಲ ನೀಡಿ ಗೌರವಿಸಿದರು.
ಬಳಿಕ ಕ್ಷೇತ್ರದ ಶ್ರೀಕಾಲಭೈರವೇಶ್ವರಸ್ವಾಮಿ, ಶ್ರೀ ಮಾಳಮ್ಮದೇವಿ ಹಾಗೂ ಆದಿಶಕ್ತಿ ಸ್ಥಭಾಂಬಿಕಾದೇವಿ ಸೇರಿದಂತೆ ಕ್ಷೇತ್ರದ ಎಲ್ಲಾ ದೇವತೆಗಳ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಸಿಎಂ ಅಶ್ವತ್ಥನಾರಾಯಣ ಅವರು ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯ ಮಹಾಸಮಾಧಿಗೂ ವಿಶೇಷ ಪೂಜೆ ನೆರೆವೇರಿಸಿದರು. ನಂತರ ನಿರ್ಮಲಾನಂದನಾಥಶ್ರೀಗಳೊಂದಿಗೆ ಕೆಲ ಕಾಲ ಚರ್ಚಿಸಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿ ತೆರಳಿದರು.
ಮಠದ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ ಸೇರಿದಂತೆ ವಿವಿಧ ಶಾಖಾಮಠಗಳ ಶ್ರೀಗಳು ಹಾಗೂ ನೂರಾರು ಮಂದಿ ಭಕ್ತರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss