ಹೊಸ ದಿಗಂತ ಆನ್ ಲೈನ್ ಡೆಸ್ಕ್
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಜಗದ್ಗುರು ಪದ್ಮಭೂಷಣ ಪುರಸ್ಕೃತ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳವರ 48ನೇ ವಾರ್ಷಿಕ ಪಟ್ಟಾಭಿಷೇಕ ಮತ್ತು ಗುರು ಸಂಸ್ಮರಣೋತ್ಸವ ಸಮಾರಂಭ ಆಯೋಜಿಸಲಾಗಿತ್ತು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿ ಆರ್ಶೀವಚನ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಎಲ್ಲಾ ಪೂಜ್ಯ ಸ್ವಾಮೀಜಿಗಳವರು, ಅಬಕಾರಿ ಸಚಿವ ಕೆ. ಗೋಪಾಯ್ಯ, ಶಾಸಕ ಸಿ.ಎಸ್. ಪುಟ್ಟರಾಜು, ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ, ಶ್ರೀ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಚಂದ್ರಶೇಖರ್ ಶಟ್ಟಿ , ಸದ್ಭಕ್ತರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.