ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲವು ವರ್ಷಗಳಿಂದ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ ಅವರು ರಿಲೇಷನ್ಶಿಪ್ನಲ್ಲಿ ಇದ್ದರು. ಈಗ ದಾಂಪತ್ಯ ಜೀವನಕ್ಕೆ ಪ್ರವೇಶ ಪಡೆದಿದ್ದಾರೆ. ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅದಿತಿ ರಾವ್ ಹೈದರಿ ಮತ್ತು ಸಿದ್ದಾರ್ಥ್ ಅವರ ಮದುವೆ ವಿಷಯ ತಿಳಿದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.
ದಕ್ಷಿಣ ಭಾರತದ ಶೈಲಿಯಲ್ಲಿ ಅದಿತಿ ರಾವ್ ಹೈದರಿ ಹಾಗೂ ಸಿದ್ದಾರ್ಥ್ ಮದುವೆ ನಡೆದಿದೆ. ‘ನೀನೇ ನನ್ನ ಚಂದ್ರ, ನೀನೇ ನನ್ನ ಸೂರ್ಯ, ನೀನೇ ನನ್ನ ನಕ್ಷತ್ರ’ ಎಂದು ಕ್ಯಾಪ್ಷನ್ ನೀಡುವ ಮೂಲಕ ಅದಿತಿ ರಾವ್ ಹೈದರಿ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮದುವೆಯಲ್ಲಿ ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿ ಆಗಿದ್ದರು.
ಅದಿತಿ ರಾವ್ ಹೈದರಿ ಮತ್ತು ಸಿದ್ದಾರ್ಥ್ ಇಬ್ಬರಿಗೂ ಇದು ಎರಡನೇ ಮದುವೆ. ಮೊದಲ ಪತ್ನಿ ಮೇಘನಾಗೆ ಸಿದ್ದಾರ್ಥ್ ಅವರು 2007ರಲ್ಲಿ ವಿಚ್ಛೇದನ ನೀಡಿದ್ದರು. ಹಾಗೆಯೇ ಅದಿತಿ ರಾವ್ ಅವರು ಮೊದಲ ಪತಿ ಸತ್ಯದೀಪ್ ಮಿಶ್ರಾಗೆ 2013ರಲ್ಲಿ ಡಿವೋರ್ಸ್ ನೀಡಿದ್ದರು. ಆ ಬಳಿಕ ಅದಿತಿ ರಾವ್ ಅವರಿಗೆ ಸಿದ್ದಾರ್ಥ್ ಜೊತೆ ಪ್ರೀತಿ ಚಿಗುರಿತ್ತು. ಈಗ ಅವರಿಬ್ಬರು ಸತಿ-ಪತಿ ಆಗಿದ್ದಾರೆ.
View this post on Instagram