Wednesday, November 30, 2022

Latest Posts

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆಹಾಕಿದ ಆದಿತ್ಯ ಠಾಕ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ್ ಜೋಡೋ ಯಾತ್ರೆ ಇಂದು ಮಹಾರಾಷ್ಟ್ರದ ನಂದೇಡ್ ಜಿಲ್ಲೆಯಲ್ಲಿ ಸಾಗುತ್ತಿದ್ದು, ಈ ವೇಳೆ ಶಿವಸೇನೆ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

ನಗರದ ಹಿಂಗೋಲಿಯ ಕಳಮ್ನೂರಿನಲ್ಲಿ ಸಾಗುತ್ತಿದ್ದ ಸಂದರ್ಭ ಆದಿತ್ಯ ಠಾಕ್ರೆ ಪಾದಯಾತ್ರೆಗೆ ಸೇರ್ಪಡೆಗೊಂಡರು. ಆದಿತ್ಯ ಠಾಕ್ರೆ ಅವರನ್ನು ಪಕ್ಷದ ಸಹೋದ್ಯೋಗಿಗಳಾದ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅಂಬಾದಾಸ್ ದಾನ್ವೆ ಹಾಗೂ ಮಾಜಿ ಶಾಸಕ ಸಚಿನ್ ಅಹಿರ್ ಬರಮಾಡಿಕೊಂಡರು.

ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ 65ನೇ ದಿನಕ್ಕೆ ಕಾಲಿಟ್ಟಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಕೂಡಾ ಲೇಹ್‌ನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!