ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಜಾಮೀನು ರದ್ದು ಕೋರಿ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಆದರೆ, ಅರ್ಜಿ ವಿಚಾರಣೆಯನ್ನು 3 ವಾರಗಳ ಕಾಲ ಹೈಕೋರ್ಟ್ ಮುಂದೂಡಿದೆ.
ಇದೇ ವೇಳೆ ಪ್ರಕರಣ ರದ್ದು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ಮುಂದೂಡಿಕೆಯಾಗಿದೆ. ಅಲ್ಲದೇ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ಪ್ರಜ್ವಲ್ ರೇವಣ್ಣ ಹಿಂಪಡೆದಿದ್ದಾರೆ. ಸೆಷನ್ಸ್ ಕೋರ್ಟ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ಅವಕಾಶ ನೀಡಿದ್ದರಿಂದ ಅರ್ಜಿ ಹಿಂಪಡೆಯಲಾಗಿದೆ.