ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ: ನಾಳೆಗೆ ಮುಗಿಯುವ ಕಲಾಪ ಇಂದೇ ಮೊಟಕು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಮಂಡಲದ ಮುಂಗಾರು ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ನಾಳೆ (ಜು.26) ಮುಗಿಯಬೇಕಿದ್ದ ಅಧಿವೇಶನ ಇಂದೇ ಮೊಟಕುಗೊಂಡಂತಾಗಿದೆ.

ಅಧಿವೇಶನ 8 ದಿನಗಳ ಕಾಲ (37 ಗಂಟೆ, 30 ನಿಮಿಷ) ನಡೆದಿದ್ದು, ರಾಷ್ಟ್ರಗೀತೆಯೊಂದಿಗೆ ಅನಿರ್ಧಿಷ್ಟಾವಧಿಗೆ ಕಲಾಪ ಮುಂದೂಡಿಕೆಯಾಗಿದೆ.

ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ರಾಜಭವನಕ್ಕೆ ತೆರಳಲಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ನಲ್ಲಿ ಭೇಟಿ ಮಾಡಿ ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ, ಮುಡಾ ಹಗರಣ ವಿಚಾರ ಚರ್ಚೆಗೆ ನೀಡದ ಬಗ್ಗೆ ಹಾಗೂ ನಾಳೆಗೆ ಮುಗಿಯುವ ಅಧಿವೇಶನ ಇಂದೇ ಮೊಟಕುಗೊಳಿಸಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುವಂತೆ ಮನವಿ ಮಾಡಿದ್ದಾರೆ.

12 ವಿಧೇಯಕಗಳ ಅಂಗೀಕಾರ
ಅಧಿವೇಶನದಲ್ಲಿ ಒಟ್ಟು 8 ದಿನಗಳ ಕಲಾಪ ನಡೆದಿದ್ದು, ಪೂರಕ ಅಂದಾಜುಗಳು, ಲೆಕ್ಕಪರಿಶೋಧಕರ ವರದಿ ಮಂಡನೆ ಮಾಡಲಾಗಿದೆ. ಭರವಸೆಗಳ ಸಮಿತಿ, ಕಾಗದ ಪತ್ರಗಳ ಸಮಿತಿ, ಅಂದಾಜು ಸಮಿತಿ, ಅನುಸೂಚಿತ ಜಾತಿ, ಅನುಸೂಚಿತ ಪಂಗಡ ಕಲ್ಯಾಣ ಸಮಿತಿ, ಅಲ್ಪಾಸಂಖ್ಯಾತ ಸಮಿತಿಯ ಮೊದಲ ವರದಿ ಮಂಡನೆ ಮಾಡಲಾಗಿದೆ.

12 ವಿಧೇಯಕಗಳನ್ನು ಅಂಗೀಕಾರ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ವಿಧೇಯಕವನ್ನು ಜಂಟಿ ಪರಿಶೀಲನಾ ಸಮಿತಿಗೆ ಒಪ್ಪಿಸಲಾಗಿದೆ. ನಿಯಮ 69 ಅಡಿಯಲ್ಲಿ 14 ಸೂಚನೆಗಳ ಅಂಗೀಕಾರ ಸಿಕ್ಕಿದ್ದು, 117 ಪ್ರಶ್ನೆಗಳಿಗೆ ಉತ್ತರ ಹಾಗೂ 1902 ಪ್ರಶ್ನೆಗಳಿಗೆ ಪೈಕಿ 1438 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 170 ಗಮನ ಸೆಳೆಯುವ ಸೂಚನೆ ಗಳಿಗೆ ಉತ್ತರ ನೀಡಲಾಗಿದೆ.

ನಾಲ್ಕು ನಿರ್ಣಯ ಪಾಸ್
ಒನ್ ನೆಷನ್-ಒನ್ ಎಲೆಕ್ಷನ್‌ಗೆ ವಿರೋಧ
ನೀಟ್ ಪರೀಕ್ಷೆ ರದ್ದು
1971 ಜನಗಣತಿ ಆಧರಿಸಿ ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ
ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳು ಪಾರಂಪರಿಕ ಅರಣ್ಯವಾಸಿಗಳ ಅಧಿನಿಯಮ 2006 ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತವಾಗಿ ಮಾರ್ಪಾಡು ಮಾಡುವ ನಿರ್ಣಯ ಕೈಗೊಳ್ಳಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!