ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಜಿ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಲಿದೆ.
ಸ್ನಾತಕೋತ್ತರ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಇಂದಿನಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದರು.
ಇಂದು ಬೆಳಿಗ್ಗೆ 9 ಗಂಟೆಯಿಂದ ಅರ್ಹ ಅಭ್ಯರ್ಥಿಗಳು ಶುಲ್ಕ ಪಾವತಿಸಬಹುದು. ಅಕ್ಟೋಬರ್ 11 ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ.
ಕ್ಲಾಸ್ -ವೈ ಅಭ್ಯರ್ಥಿಗಳು ಶುಲ್ಕ ಪಾವತಿಸಿದ ನಂತರ ಮೂಲ ದಾಖಲೆಗಳನ್ನು ಪ್ರಾಧಿಕಾರದ ಕಚೇರಿಗೆ ಸಲ್ಲಿಸಬೇಕು. ಶುಲ್ಕ ಪಾವತಿ ಮತ್ತು ಮೂಲ ದಾಖಲೆ ಸಲ್ಲಿಸಿದ ಬಳಿಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವಿರುತ್ತದೆ. ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಅ.12ರಂದು ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.