ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ: ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (Common Entrance Test – CET) ಮೇ 20ರಿಂದ ಆರಂಭವಾಗಲಿವೆ.
20 ಮತ್ತು 21ರಂದು ಸಿಇಟಿ ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ. ಹೊರ ನಾಡು, ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತೆ. ಇನ್ನು ಮೇ 22ರಂದು ಸಿಇಟಿ ಅಂಗವಾಗಿ ಕನ್ನಡ ಪರೀಕ್ಷೆ ನಡೆಸಲಾಗುವುದು.
ಇಂಜಿನಿಯರಿಂಗ್ / ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ(ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್‌ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!