ಕಲಬುರಗಿ| ಶರಣಬಸವ ವಿಶ್ವವಿದ್ಯಾಲಯದಿಂದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಹೊಸ ದಿಗಂತ ವರದಿ, ಕಲಬುರಗಿ:

ಕಲಬುರಗಿ ನಗರದಲ್ಲಿ ಇತ್ತೀಚೆಗೆ ನಡೆದ 36ನೇ ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವಿವಿಧ ಪ್ರಶಸ್ತಿಗಳಿಗೆ ಭಾಜನರಾದ ಪುರಸ್ಕೃತರನ್ನು ಶರಣಬಸವ ವಿಶ್ವವಿದ್ಯಾಲಯ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಮಂಗಳವಾರ ವಿವಿ ಸಮಾವೇಶ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಕಲಬುರಗಿ ಬ್ರ್ಯಾಂಡ್ ಪ್ರಶಸ್ತಿ ಪುರಸ್ಕೃತರಾದ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಗಳು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ, ಸೇರಿದಂತೆ ಕಲಬುರಗಿ ಬ್ರ್ಯಾಂಡ್ ಪ್ರಶಸ್ತಿ ಪುರಸ್ಕೃತ ಪ್ರಶಾಂತ ಬಿಜಾಸ್ಪುರ್ ಹಾಗೂ ಪತ್ರಕರ್ತರ ಸಮ್ಮೇಳನದಲ್ಲಿ ಅಭಿಮಾನಿ ಪ್ರಕಾಶನ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಮತ್ತು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡೀನ್ ಶ್ರೀ ಟಿ.ವಿ.ಶಿವಾನಂದನ್ ಅವರಿಗೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ವಿ.ನಿಷ್ಠಿ ಸನ್ಮಾನಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರು ಡಾ.ಅಪ್ಪಾಜಿಯವರ ಪರವಾಗಿ ಸನ್ಮಾನ ಸ್ವೀಕರಿಸಿದರು. ಕೇಂದ್ರ ಸರ್ಕಾರದಿಂದ ಇನ್‍ಕ್ರೆಡಿಬಲ್ ಇಂಡಿಯಾ (ಕರ್ನಾಟಕ ಚಾಪ್ಟರ್) ಸದಸ್ಯೆಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಮತ್ತು ಪ್ರಯಾಣ ವಿಭಾಗದ ಚೇರ್‍ಪರ್ಸನ್ ಪ್ರೊ.ವಾಣಿಶ್ರೀ ಅವರ ಸಾಧನೆಗಾಗಿ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ನಿರಂಜನ್ ನಿಷ್ಠಿ ಅವರು ಎಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವವನ್ನು ಸಲ್ಲಿಸಿದರು ಮತ್ತು ಅಂತಹ ಪ್ರಶಸ್ತಿಗಳನ್ನು ಪಡೆಯುವುದೆಂದರೆ, ಸಮಾಜವು ಆಯಾ ಕ್ಷೇತ್ರಗಳಲ್ಲಿನ ಎಲ್ಲಾ ಹೋರಾಟ ಮತ್ತು ಸಾಧನೆಗಳನ್ನು ಗುರುತಿಸಿದೆ ಎಂದರ್ಥ ಎಂದು ಹೇಳಿದರು. ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸೂಚಕವಾಗಿ ಅಂತಹ ಪ್ರಶಸ್ತಿಗಳನ್ನು ಪ್ರತಿಯೊಬ್ಬ ವ್ಯಕ್ತಿಯೂ ಪ್ರಶಂಸಿಸಬೇಕು ಮತ್ತು ಗುರುತಿಸಬೇಕು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದವರು ನಡೆಸುತ್ತಿರುವ ಶರಣಬಸವೇಶ್ವರ ವಸತಿ ಶಾಲೆಯ ಹಳೆವಿದ್ಯಾರ್ಥಿಯಾಗಿರುವ ಯುವ ಚಾರ್ಟರ್ಡ್ ಅಕೌಂಟೆಂಟ್ ಪ್ರಶಾಂತ ಬಿಜಾಸಪುರ ಮತ್ತು 21 ನೇ ವಯಸ್ಸಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆದ ಶ್ರೀ ಬಿಜಾಸಪುರ ಅವರ ಈ ಸಾಧನೆಯನ್ನು ಅವರು ಪ್ರಶಂಸಿಸಿದರು. ಈ ಚಿಕ್ಕ ವಯಸ್ಸಿನಲ್ಲಿ ಈ ಸಾಧನೆಗಾಗಿ ನಿಮ್ಮ ಬಗ್ಗೆ ಎಲ್ಲರಿಗೂ ಹೆಮ್ಮೆ ಇದೆ ಎಂದರು.
ಸನ್ಮಾನ ಸ್ವೀಕರಿಸಿ ಶ್ರೀ ಶಿವಾನಂದನ್ ಅವರು ತಮ್ಮ ಸನ್ಮಾನ ಸ್ವೀಕರಿಸಿ ಮಾತನಾಡಿದgರು. ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ನಿಷ್ಠಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಸಮಕುಲಪತಿ ಪ್ರೊ.ವಿ.ಡಿ.ಮೈತ್ರಿ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಅಧಿಕಾರಿಗಳಿಗೆ ಹಾಗೂ ಈ ಮನ್ನಣೆ ಪಡೆಯಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪ್ರೊ.ವಾಣಿಶ್ರೀ ಸನ್ಮಾನ ಸ್ವೀಕರಿಸಿ ಮಾತನಾಡಿದರ. ಚೆನ್ನಪ್ಪ ಸ್ವಾಗತಿಸಿದರೆ, ಮತ್ತೋರ್ವ ವಿದ್ಯಾರ್ಥಿ ರಘುವೀರ್ ಸಿಂಗ್ ನಿರೂಪಿಸಿದರು ಹಾಗೂ ಸುಷ್ಮಾ ವಂದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!