ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯೋಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯು ತನ್ನ ಹೇಳಿಕೆಯಲ್ಲಿ ದೃಢಪಡಿಸಿದೆ.
ಏಕಾಏಕಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ 96 ವರ್ಷ ವಯಸ್ಸಿನ ಅಡ್ವಾಣಿಯವರನ್ನು ಬುಧವಾರ ತಡರಾತ್ರಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಸ್ತುತ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ, ಹೆಚ್ಚಿನ ಮಾಹಿತಿ ನೀಡಲಾಗುತ್ತದೆ ಎಂದು ಆಸ್ಪತ್ರೆ ಅಪ್‌ಡೇಟ್ ನೀಡಿದೆ.