ನಾಳೆ ಸಂಜೆವರೆಗೆ ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 8ನೇ ಆರೋಪಿ ಆಗಿರುವ ವಕೀಲ ದೇವರಾಜೇಗೌಡ ಅವರು ನಾಳೆ ಸಂಜೆ 5:00 ವರೆಗೆ ಎಸ್‌ಐಟಿಗೆ ನೀಡಿ ಹಾಸನದ ಐದನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.

ಕಳೆದ ಹಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ವಕೀಲ ದೇವರಾಜ ಗೌಡನನ್ನು ಇಂದು ಎಸ್‌ಐಟಿ ಅಧಿಕಾರಿಗಳು ಹಾಸನದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್, ನಾಳೆ ಸಂಜೆ 5:00 ಗಂಟೆವರೆಗೆ ದೇವರಾಜೇಗೌಡ ಎಸ್ ಐ ಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಈ ಆದೇಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!