ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆನ್‌ಡ್ರೈವ್ ಪ್ರಕರಣದಲ್ಲಿ ಸ್ಫೋಟಕ ಆಡಿಯೋ ರಿಲೀಸ್ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಅವರನ್ನು ವಶಕ್ಕೆ ಪಡೆಯಲಾಗಿದೆ.
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್ ದಾಖಲಾಗಿತ್ತು.
ಆಡಿಯೊ ವೈರಲ್
ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿರುವ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲಾ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್ ಆಗಿದೆ.