ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ವೈರಲ್ ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ವಕೀಲ ದೇವರಾಜೇಗೌಡ ಅವರನ್ನುಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ 5ನೇ ಅಧಿಕ ಸಿವಿಲ್ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಆದೇಶಿಸಿದೆ.
ಏಪ್ರಿಲ್ 23 ರಂದು ಹಾಸನ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ನಲ್ಲಿ 8ನೇ ಆರೋಪಿಯಾಗಿ ದೇವರಾಜೇಗೌಡ ಅವರ ಹೆಸರು ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡ ಅವರನ್ನು ವಿಚಾರಣೆಗಾಗಿ ಶುಕ್ರವಾರ ಒಂದು ದಿನದ ಮಟ್ಟಿಗೆ ಎಸ್ಐಟಿ ವಶಕ್ಕೆ ಪಡೆಯಲಾಗಿತ್ತು.
ದೇವರಾಜೇಗೌಡ ಅವರ ಕಸ್ಟಡಿ ಅವಧಿ ಮುಕ್ತಾಯವಾಗಿದ್ದರಿಂದ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು ಮತ್ತೆ ಎರಡು ದಿನ ಕಸ್ಟಡಿಗೆ ಕೇಳಿದ್ದರು. ಹೀಗಾಗಿ ಮೇ 20ರ ಸಂಜೆ ಐದು ಗಂಟೆಗೆ ಕೋರ್ಟ್ ಮುಂದೆ ಹಾಜರು ಪಡಿಸುವಂತೆ ನ್ಯಾಯಾಲಯ ಸೂಚಿಸಿ, ಎರಡು ದಿನ ಕಸ್ಟಡಿಯನ್ನು ಮುಂದುವರಿಸಿ ಆದೇಶಿಸಿದೆ.