Tuesday, May 30, 2023

Latest Posts

ವಕೀಲೆ ವಿಕ್ಟೋರಿಯಾ ಗೌರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕಾರ ; ನೇಮಕ ತಡೆಗೆ ನಿರಾಕರಿಸಿದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರು ಇಂದು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ, ಅವರ ಉನ್ನತೀಕರಣದ ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

“ನಾವು ರಿಟ್ ಅರ್ಜಿಗಳನ್ನು ಪರಿಗಣಿಸುತ್ತಿಲ್ಲ” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಒಳಗೊಂಡ ವಿಶೇಷ ಪೀಠ ಹೇಳಿದೆ.

ವಿಶೇಷ ಪೀಠವು ಬೆಳಗ್ಗೆ 10.25ರಲ್ಲಿ ಅರ್ಜಿಯ ವಿಚಾರಣೆ ನಡೆಸಿತಾದರೂ, ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ನೀಡಲು ನಿರಾಕರಿಸಿತು.

ಅತ್ತ ರಿಟ್‌ ಅರ್ಜಿ ವಿಚಾರಣೆ ನಡೆಯುವ ಹೊತ್ತಲ್ಲೇ ಇತ್ತ ಗೌರಿ ಅವರು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಗೌರಿ ನೇಮಕವನ್ನು ವಿರೋಧಿಸಿ ಮದ್ರಾಸ್ ಹೈಕೋರ್ಟ್‌ನ ಮೂವರು ವಕೀಲರು ರಿಟ್‌ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠವು ಫೆಬ್ರವರಿ 10ಕ್ಕೆ ವಿಚಾರಣೆ ನಿಗದಿ ಮಾಡಿತ್ತು. ಗೌರಿ ಅವರ ನೇಮಕಾತಿಯ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಹಿರಿಯ ವಕೀಲ ರಾಜು ರಾಮಚಂದ್ರನ್‌ ಅವರು ಪೀಠಕ್ಕೆ ತಿಳಿಸಿದ ನಂತರ ಅರ್ಜಿಯ ವಿಚಾರಣೆಯನ್ನು ಫೆ.7ಕ್ಕೆ ಮರು ನಿಗದಿ ಮಾಡಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!