Sunday, April 18, 2021

Latest Posts

ವಕೀಲ ಸಂರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ಮಡಿಕೇರಿಯಲ್ಲಿ ವಕೀಲರ ಪ್ರತಿಭಟನೆ

ಹೊಸ ದಿಗಂತ ವರದಿ, ಮಡಿಕೇರಿ:

ದೇಶದ ವಿವಿಧೆಡೆ ನಡೆಯುತ್ತಿರುವ ವಕೀಲರ ಮೇಲಿನ ದಾಳಿಯನ್ನು ಖಂಡಿಸಿ ಮತ್ತು ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಮಡಿಕೇರಿ ವಕೀಲರ ಸಂಘ ಪ್ರತಿಭಟನೆ ನಡೆಸಿತು.
ರಾಜ್ಯ ಮತ್ತು ಕೇಂದ್ರ ಸರ್ಕಾರ ವಕೀಲರ ರಕ್ಷಣೆಗಾಗಿ ವಕೀಲ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ರಾಷ್ಟ್ರ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಕೀಲರ ಮೇಲೆ ಹಲ್ಲೆ, ಹತ್ಯೆಯಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜೀವ ಭಯದಲ್ಲಿ ಕಾರ್ಯ ನಿರ್ವಹಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಹೊಸಪೇಟೆ ವಕೀಲರ ಸಂಘದ ಆವರಣದಲ್ಲಿ ತರಳ್ಳಿ ವೆಂಕಟೇಶ್ ಎಂಬವರನ್ನು ಹತ್ಯೆ ಮಾಡಲಾಗಿದೆ. ತೆಲಂಗಾಣದ ವಕೀಲ ದಂಪತಿ ಗುಂಡುವಾಮನ್ ರಾವ್ ಮತ್ತು ಬಿ.ವಿ.ನಾಗಮಣಿ ಅವರ ಮೇಲೆ ಹಲ್ಲೆ ನಡೆದಿದೆ ಎಂದು ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು.
ವಕೀಲರಿಗೆ ರಕ್ಷಣೆ ಇಲ್ಲದಂತಾಗಿದ್ದು, ತಕ್ಷಣ ಸರ್ಕಾರ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೋಳಿಸಬೇಕೆಂದು ಒತ್ತಾಯಿಸಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಕವನ್, ಉಪಾಧ್ಯಕ್ಷ ಪಿ.ಯು.ಪ್ರೀತಮ್, ಕಾರ್ಯದರ್ಶಿ ಡಿ.ಜಿ.ಕಿಶೋರ್, ವಕೀಲರುಗಳಾದ ಪವನ್ ಪೆಮ್ಮಯ್ಯ, ರಾಜೇಶ್, ಭಾನುಪ್ರಕಾಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss