ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಬೆಳಗಾವಿ:
ನಾಯಕತ್ವ ಬದಲಾವಣೆಯಿಂದ ನಿರಾಳವಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭಾನುವಾರ ಬೆಳಗಾವಿಗೆ ಆಗಮಿಸಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಯಾಗಿರುವ ಪ್ರವಾಹ ಪರಿಸ್ಥಿತಿಯ ಕುರಿತು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಬೆಳಗಾವಿಗೆ ಆಗಮಿಸಲಿರುವ ಅವರು, ಚಿಕ್ಕೋಡಿ, ರಾಯಬಾಗ, ಗೋಕಾಕ, ಸವದತ್ತಿ, ಬಾಗಲಕೋಟ, ವಿಜಯಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಸುವರ್ಣ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.