ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾಹೆ ಉದ್ಯಾನನಗರಿ ಸಜ್ಜಾಗಿದ್ದು, ಈ ನಡುವಲ್ಲೇ ಮಾಂಸ ಮಾರಾಟಕ್ಕೆ ಹೇರಲಾಗಿದ್ದ ನಿಷೇಧವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಿಂಪಡೆದಿದೆ.
ಹೋಟೆಲ್ ಮಾಲೀಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶವನ್ನು ಹಿಂಪಡೆದಿದ್ದಾರೆಂದು ಬೆಂಗಳೂರು ಹೊಟೇಲ್ ಅಸೋಸಿಯೇಷನ್ ತಿಳಿಸಿದೆ. ಆದರೆಸ, ಬಿಬಿಎಂಪಿ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.
ಹೋಟೆಲ್ ಮಾಲೀಕರ ಮನವಿ ಪರಿಗಣನೆಯಲ್ಲಿದೆ. ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಯಾವುದೇ ಅಧಿಕೃತ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪಾಲಿಕೆ ಮೂಲಗಳು ತಿಳಿಸಿವೆ.
ಫೆಬ್ರವರಿ 10 ರಿಂದ 14 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಕ್ಷಿಗಳ ದಾಳಿಗಳನ್ನು ತಡೆಗಟ್ಟಲು ಸುತ್ತಮುತ್ತಲಿನ ಪ್ರದೇಶಗಳಲ್ಲ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿತ್ತು.