April 4, 2026
Saturday, April 4, 2026
spot_img

ಅಫ್ಘಾನ್–ಪಾಕ್ ಸಂಘರ್ಷ: ಪಾಕಿಗಳಿಗೆ ಬೆಂಬಲ ಕೊಟ್ಟ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಫ್ಘಾನಿಸ್ತಾನ–ಪಾಕಿಸ್ತಾನ ಗಡಿ ಸಂಘರ್ಷದ ವಿಚಾರದಲ್ಲಿ ಪಾಕಿಸ್ತಾನ ಪರ ನಿಲುವು ವ್ಯಕ್ತಪಡಿಸಿದ್ದಾರೆ.

ಎರಡನೇ ಅವಧಿಯ ಆಡಳಿತದಲ್ಲಿ ಹಲವು ಯುದ್ಧಗಳನ್ನು ತಡೆಯಲು ಸಾಧ್ಯವಾಯಿತು ಎಂದು ಹೇಳಿಕೊಂಡಿರುವ ಟ್ರಂಪ್, ಈ ಬಾರಿ ಪಾಕಿಸ್ತಾನದ ಕ್ರಮವನ್ನು ಸಮರ್ಥಿಸಿದ್ದಾರೆ.

ಇತ್ತೀಚೆಗೆ ನಡೆದ ವಾಯುದಾಳಿಯಲ್ಲಿ ಪಾಕಿಸ್ತಾನ ಪಡೆಗಳು ಸುಮಾರು 297 ತಾಲಿಬಾನ್ ಸೈನಿಕರನ್ನು ಹೊಡೆದುರುಳಿಸಿದ್ದಾಗಿ ವರದಿಯಾಗಿದೆ. ಘಟನೆಯಲ್ಲಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯ ನಂತರ ಪಾಕಿಸ್ತಾನ ಅಫ್ಘಾನಿಸ್ತಾನದ ವಿರುದ್ಧ ಬಹಿರಂಗ ಯುದ್ಧ ಘೋಷಿಸಿದೆ.

ಇದನ್ನೂ ಓದಿ:

ಈ ಕುರಿತು ಪ್ರತಿಕ್ರಿಯಿಸಿದ ಟ್ರಂಪ್, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ಗಡಿ ಪರಿಸ್ಥಿತಿಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅಗತ್ಯವಿದ್ದರೆ ಮಧ್ಯಪ್ರವೇಶಿಸಲು ಸಿದ್ಧನಿದ್ದೇನೆ, ಆದರೆ ಪಾಕಿಸ್ತಾನದೊಂದಿಗೆ ನಿಂತಿದ್ದೇನೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ನಡೆದ ದಾಳಿಯಲ್ಲಿ ಅಫ್ಘಾನ್ ಪಡೆಗಳು 55 ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದ್ದು, 23 ಮಂದಿಯನ್ನು ಬಂಧಿಸಿದ್ದವು. 2021ರಲ್ಲಿ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !