ಹಿಟ್ ಮ್ಯಾನ್ ಅಬ್ಬರಕ್ಕೆ ಎಡವಿದ ಅಫ್ಘಾನ್: ಭಾರತಕ್ಕೆ ಗೆಲುವಿನ ಖುಷಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೋಹಿತ್ ಶರ್ಮಾ ಸ್ಫೋಟಕ ಸೆಂಚುರಿ, ಇಶಾನ್ ಕಿಶನ್ ಹಾಗೂ ವಿರಾಟ್ ಕೊಹ್ಲಿ ಸಾಥ್ ನಿಂದ ಟೀಂ ಇಂಡಿಯಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ.

ಆಫ್ಘಾನಿಸ್ತಾನ ನೀಡಿದ 273 ರನ್ ಟಾರ್ಗೆಟ್‌ನ್ನು ಭಾರತ 35 ಓವರ್‌ಗಳಲ್ಲಿ ಚೇಸ್ ಮಾಡಿ ಭರ್ಜರಿ 8 ವಿಕೆಟ್ ಗೆಲುವು ದಾಖಲಿಸಿದೆ .

ಸ್ಪರ್ಧಾತ್ಮಕ ಮೊತ್ತ ಚೆಸ್ ಮಾಡಲು ಶುರು ಮಾ ಇಂಡಿಯಾಕ್ಕೆ ರೋಹಿತ್ ಹಾಗೂ ಇಶಾನ್ ಕಿಶನ್ ಉತ್ತಮ ಆರಂಭ ನೀಡಿದರು.

ರೋಹಿತ್ ಶರ್ಮಾ ಬೌಂಡರಿ ಹಾಗೂ ಸಿಕ್ಸರ್ ಮೂಲಕ ಅಬ್ಬರಿಸಿದರು. ಇತ್ತ ಇಶಾನ್ ಕಿಶನ್ ಕೂಡ ಉತ್ತಮ ಸಾಥ್ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 156 ರನ್ ಜೊತೆಯಾಟ ನೀಡಿತು. ಇಶಾನ್ ಕಿಶನ್ 47 ರನ್ ಸಿಡಿಸಿ ಔಟಾದರು.

. ರೋಹಿತ್ ಶರ್ಮಾ 63 ಎಸೆತದಲ್ಲಿ ಸೆಂಚುರಿ ಪೂರೈಸಿದರು.ಏಕದಿನದಲ್ಲಿ ರೋಹಿತ್ ಶರ್ಮಾ 31ನೇ ಶತಕ ಪೂರೈಸಿದರು. ಈ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಶತಕ ದಾಖಲೆ ಬರೆದಿದ್ದಾರೆ.

ರೋಹಿತ್ ಶರ್ಮಾ 84 ಎಸೆತದಲ್ಲಿ 16 ಬೌಂಡರಿ ಹಾಗೂ 5 ಸಿಕ್ಸರ್ ಮೂಲಕ 131 ರನ್ ಸಿಡಿಸಿ ಔಟಾದರು. ರೋಹಿತ್ ವಿಕೆಟ್ ಪತನದ ಬಳಿಕ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಜೊತೆಯಾಟ ಮುಂದುವರಿಯಿತು.ವಿರಾಟ್ ಕೊಹ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಇತ್ತ ಶ್ರೇಯಸ್ ಅಯ್ಯರ್ ಅಜೇಯ 25 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 35 ಓವರ್‌ಗಳಲ್ಲಿ 8 ವಿಕೆಟ್ ಗೆಲುವು ದಾಖಲಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!