Tuesday, July 5, 2022

Latest Posts

ಕಾಬೂಲ್‌ನಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಫ್ಗನ್‌ ಮಹಿಳೆ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಾಬೂಲ್‌ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕ ಮಿಲಿಟರಿ ಭಾನುವಾರ ಹೇಳಿದೆ.
ಅಫ್ಘಾಸ್ತಾನದಿಂದ ಜನರನ್ನು ಸ್ಥಳಾಂತರಿಸಲೆಂದೇ ರ್‍ಯಾಮ್‌ಸ್ಟೈನ್ ವಾಯುನೆಲೆಯನ್ನು ಅಮೆರಿಕ ತಾತ್ಕಾಲಿಕವಾಗಿ ಬಳಸಿಕೊಳ್ಳುತ್ತಿದೆ.
ಈ ಕುರಿತು ಟ್ವೀಟ್‌ ‌ಮಾಡಿರುವ ಅಮೆರಿಕ ಮಿಲಿಟರಿಯ ‘ಏರ್ ಮೊಬಿಲಿಟಿ’ ಕಮಾಂಡ್, ‘ಶನಿವಾರ ವಿಮಾನ ಹಾರಾಟದ ಸಮಯದಲ್ಲಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ವಿಮಾನದಲ್ಲಿ ವಾಯು ಒತ್ತಡವನ್ನು ಹೆಚ್ಚಿಸುವ ಉದ್ದೇಶದಿಂದ, ವಿಮಾನ ಹಾರಾಟದ ಎತ್ತರವನ್ನೂ ಹೆಚ್ಚಿಸಲು ವಿಮಾನದ ಕಮಾಂಡರ್ ನಿರ್ಧರಿಸಿದ್ದರು. ಹೀಗೆ ಮಾಡುವುದರಿಂದ ದೇಹಾರೋಗ್ಯದಲ್ಲಿ ಸ್ಥಿರತೆ ಕಾಪಾಡಬಹುದು ಮತ್ತು ಜೀವ ಉಳಿಸಬಹುದು,’ ಎಂದು ಹೇಳಿದೆ.
‘ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಬರುತ್ತಲೇ, ಅಮೆರಿಕದ ವೈದ್ಯಕೀಯ ಸಿಬ್ಬಂದಿ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿ ಹೆರಿಗೆ ಮಾಡಿಸಿದರು. ಮಹಿಳೆಗೆ ಹೆಣ್ಣು ಮಗು ಜನಿಸಿದೆ. ತಾಯಿ ಮತ್ತು ಮಗುವನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರೂ ಆರೋಗ್ಯವಾಗಿದ್ದಾರೆ’ ಎಂದು ಅಮೆರಿಕ ವಾಯುಪಡೆ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss