Thursday, July 7, 2022

Latest Posts

ಅಫ್ಘಾನ್ ಬಿಕ್ಕಟ್ಟು: ಪ್ರಧಾನಿ ಮೋದಿ-ಜರ್ಮನಿಯ ಚಾನ್ಸಲರ್ ಅಂಗೆಲಾ ಮೆರ್ಕೆಲ್ ಮಹತ್ವದ ಮಾತುಕತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು  ಜರ್ಮನಿಯ ಚಾನ್ಸಲರ್ ಅಂಗೆಲಾ ಮೆರ್ಕೆಲ್ ಅವರ ಜೊತೆ ಅಫಘಾನಿಸ್ತಾನದಲ್ಲಿ ಎದುರಾದ ಬಿಕ್ಕಟ್ಟು, ನರೆ ರಾಷ್ಟ್ರ ಮತ್ತು ಜಗತ್ತಿನ ಮೇಲೆ ಅದು ಬೀರಬಹುದಾದ  ಪರಿಣಾಮದ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿಯವರು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.’ ಚಾನ್ಸೆಲರ್ ಮರ್ಕೆಲ್ ಜೊತೆ ಮಾತನಾಡಿದ್ದೇನೆ. ಅಫಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳು ಸೇರಿದಂತೆ ದ್ವಿಪಕ್ಷೀಯ, ಬಹುಪಕ್ಷೀಯ ಮತ್ತು ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿಲಾಗಿದೆ. ಭಾರತ-ಜರ್ಮನಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲಾಗಿದೆ’ ಎಂದಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಪ್ರಕಟಣೆ ಹೊರಡಿಸಿದ್ದು, ‘ಶಾಂತಿ ಮತ್ತು ಭದ್ರತೆಗೆ ಒತ್ತು ನೀಡುವುದು ಮತ್ತು ಅಫಘಾನಿಸ್ತಾನದಲ್ಲಿ ಸಿಲುಕಿರುವವರನ್ನು ಕರೆಸಿಕೊಳ್ಳುವುದು ಮೊದಲ ಆದ್ಯತೆಯಾಗಿದೆ ಎಂದು ಇಬ್ಬರೂ ನಾಯಕರು ಹೇಳಿರುವುದಾಗಿ ತಿಳಿಸಿದೆ.

‘ಹವಾಮಾನ ಸಹಕಾರ, ಕೋವಿಡ್-19 ಲಸಿಕೆಗಳ ಸಹಕಾರ, ಹಾಗೂ ವ್ಯಾಪಾರ ಮತ್ತು ಆರ್ಥಿಕ ಸಂಬಂಧವನ್ನು ಉತ್ತೇಜಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ಕಾರ್ಯಾಲಯ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss