ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 280 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಫ್ಘಾನಿಸ್ತಾನದಲ್ಲಿ ಉಂಟಾದ ಪ್ರಬಲ ಭೂಕಂಪಕ್ಕೆ ಕನಿಷ್ಠ 280 ಜನ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ಅಲ್ಲಿನ ಸ್ಥಳೀಯ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.  ಖೋಸ್ಟ್‌ನ ಆಗ್ನೇಯಕ್ಕೆ 44 ಕಿಮೀ (27 ಮೈಲಿ) ದೂರದಲ್ಲಿ ಭೂಕಂಪನದ ಕೇಂದ್ರಬಿಂದು ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 6.1 ಭೂಕಂಪದ ತೀವ್ರತೆ ದಾಖಲಾಗಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಭಾರತದಲ್ಲಿ 500 ಕಿ.ಮೀಗಿಂತಲೂ ಹೆಚ್ಚು ಕಂಪನದ ಅನುಭವವಾಗಿದೆ ಎಂದು ವರದಿ ಮಾಡಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮತ್ತು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಭೂಕಂಪನದ ಕೇಂದ್ರಬಿಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಚಿತ್ರಗಳು ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಕುಸಿದ ಮನೆಗಳು, ಅವಶೇಷಗಳಡಿಯಲ್ಲಿ ಸತ್ತು ಬಿದ್ದಿರುವ ಶವಗಳನ್ನು ತೋರಿಸಿವೆ. ಕೂಡಲೇ ಭದ್ರತಾ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ಹಲಿಕಾಪ್ಟರ್‌ ಮೂಲಕ ಅವಶೇಷಗಳಡಿಯಲ್ಲಿದ್ದವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ವರದಿ ಮಾಡಿದೆ.

ಬಖ್ತರ್ ನ್ಯೂಸ್ ಏಜೆನ್ಸಿಯ ವರದಿಯ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ, 600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ರ್ಕಾರದ ವಕ್ತಾರ ಬಿಲಾಲ್ ಕರಿಮಿ ಟ್ವೀಟ್ ಮಾಡಿದ್ದು, ದುರದೃಷ್ಟವಶಾತ್, ಕಳೆದ ರಾತ್ರಿ ಪಕ್ಟಿಕಾ ಪ್ರಾಂತ್ಯದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ಭೂಕಂಪ ಸಂಭವಿಸಿದೆ, ಈ ಭೂಕಂಪ ನಮ್ಮ ದೇಶವಾಸಿಗಳನ್ನು ಪ್ರಾಣ ತೆಗೆದು ಹಲವರನ್ನು ಗಾಯಗೊಳಿಸಿದೆ ಮತ್ತು ನೂರಾರು ಮನೆಗಳನ್ನು ನಾಶ ಮಾಡಿದೆʼ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಾವು-ನೋವುಗಳು ಆಗುವುದನ್ನು ತಡೆಯಲು ತಕ್ಷಣವೇ ಆ ಪ್ರದೇಶಕ್ಕೆ ನಮ್ಮ ರಕ್ಷಣಾ ತಂಡಗಳನ್ನು ಕಳುಹಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!