ಸ್ಟೇಡಿಯಂನಲ್ಲಿ ಕುರ್ಚಿಗಳಿಂದ ಹೊಡೆದಾಡಿದ ಆಫ್ಘನ್-ಪಾಕ್‌ ಅಭಿಮಾನಿಗಳು: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯಾ ಕಪ್-2022 ಟೂರ್ನಿಯ ಅಂಗವಾಗಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಬುಧವಾರ ರಾತ್ರಿ ನಡೆಯಿತು.  ಕೊನೆಯವರೆಗೂ ಪಾಕಿಸ್ತಾನ ಸೋಲುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಕೊನೆಯ ಓವರ್‌ನಲ್ಲಿ ಪಾಕಿಸ್ತಾನ ಗೆಲುವಿನ ನಗೆ ಬೀರಿತು. ಈ ಪಂದ್ಯವನ್ನು ಉಭಯ ದೇಶಗಳ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಸಂಭ್ರಮದಿಂದ ವೀಕ್ಷಿಸಿದರು. ಪಾಕಿಸ್ತಾನದ ಗೆಲುವಿನ ನಂತರ ಅಫ್ಘಾನಿಸ್ತಾನ ಅಭಿಮಾನಿಗಳು ಉದ್ರಿಕ್ತರಾಗಿ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ವಾಗ್ವಾದಕ್ಕಿಳಿದು ಕುರ್ಚಿಗಳಲ್ಲಿ ಹೊಡೆದಾಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತು. ಬಳಿಕ ಪಾಕಿಸ್ತಾನ 19.2 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು. ತಮ್ಮದೇ ತಂಡದ ಸೋಲನ್ನು ಅರಗಿಸಿಕೊಳ್ಳಲಾಗದ ಅಭಿಮಾನಿಗಳು ಕ್ರೀಡಾಂಗಣದಲ್ಲಿಯೇ ಪಾಕಿಸ್ತಾನಿ ಅಭಿಮಾನಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಕ್ಕ ಸಿಕ್ಕವರ ಮೇಲೆ  ಕುರ್ಚಿಗಳಿಂದ ಹಲ್ಲೆ ಮಾಡಿದ್ದಾರೆ.

ಪಾಕ್ ಅಭಿಮಾನಿಗಳೂ ತಿರುಗಿ ಬಿದ್ದಿದ್ದು, ಕ್ರೀಡಾಂಗಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!