ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಬಸ್: 24 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿಯಂತ್ರಣ ತಪ್ಪಿ ಬಸ್‌ ಕಾಲುವೆಗೆ ಉರುಳಿ 24ಮಂದಿ ಸಾವನ್ನಪ್ಪಿರುವ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ಈ ಅಪಘಾತದಲ್ಲಿ 9 ಮಕ್ಕಳು ಮತ್ತು 12 ಮಹಿಳೆಯರು ಸೇರಿದಂತೆ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸರ್-ಇ-ಪುಲ್ ಪ್ರಾಂತ್ಯದ ಪೊಲೀಸ್ ವಕ್ತಾರ ದೀನ್ ಮೊಹಮ್ಮದ್ ಹೇಳಿದ್ದಾರೆ. ಸಾರ್-ಇ-ಪುಲ್ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮದುವೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಸ್ಥಳೀಯ ಪೊಲೀಸ್ ಕಮಾಂಡರ್ ವಕ್ತಾರ ದೀನ್ ಮೊಹಮ್ಮದ್ ನಜಾರಿ, ಅಪಘಾತಕ್ಕೆ ಬಸ್ ಚಾಲಕ ಕಾರಣ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!